ಬೆಂಗಳೂರು : ನಾಯಕತ್ವ ಬದಲಾವಣೆ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತಗಳ್ಳತನದ ವಿರುದ್ಧ ಮಾತನಾಡುವಾಗ ಕೇಂದ್ರ ಚುನಾವಣಾ ಆಯುಕ್ತರನ್ನು ರಾಜಕೀಯ ಪುಢಾರಿ ಎಂದು ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನೇ ರಾಜಕೀಯ ಪುಢಾರಿ ಎಂದು ಜರಿದಿದ್ದಾರೆ.
ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಒಬ್ಬ ರಾಜಕೀಯ ಫುಡಾರಿ, ರಾಹುಲ್ ಗಾಂಧಿ ಮತಗಳ್ಳತನವನ್ನು ಸಾಕ್ಷಿ ಸಮೇತ ಬಹಿರಂಗಪಡಿಸಿದ್ದರೂ ಚುನಾವಣಾ ಆಯುಕ್ತರು ಮಾತ್ರ ರಾಹುಲ್ ಗಾಂಧಿಯ ತೇಜೋವಧೆ ಮಾಡುತ್ತಿದ್ದಾರೆ. ಅವರು ರಾಜಕೀಯ ಪುಢಾರಿ ರೀತಿ ಮಾತನಾಡುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸದ್ಯ ಈ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!


















