ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪಿಂಚಣಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ (PFRDA Recruitment 2025) 40 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅಭ್ಯರ್ಥಿಗಳು ಆಗಸ್ಟ್ 6ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಪಿಂಚಣಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ
ಒಟ್ಟು ಹುದ್ದೆಗಳು: 40
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ಎ
ಅರ್ಜಿ ವಿಧಾನ: ಆನ್ ಲೈನ್
ವಿದ್ಯಾರ್ಹತೆ ಏನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. B.Tech/B.E, LLB ಪದವಿ, M.A, M.Com, MBA/PGDM ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜುಲೈ 2ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 1 ಸಾವಿರ ರೂ. ಅರ್ಜಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 45-89 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಅಧಿಕೃತ ವೆಬ್ ಸೈಟ್ ಆಗಿರುವ pfrda.org.in ಭೇಟಿ ನೀಡಬೇಕು
- ನೇಮಕಾತಿ ಕುರಿತ ಅಧಿಸೂಚನೆಯನ್ನು ಪರಿಶೀಳನೆ ಮಾಡಬೇಕು
- ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
- ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು