ಬೆಂಗಳೂರು: ತೊಗರಿ ಹಾಗೂ ಕಡಲೆಯನ್ನು ಕನಿಷ್ಠ ಬೆಂಬಲ ಬೆಲೆ (MSP)ಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ರಾಜ್ಯ ಸರ್ಕಾರದ ಮನವಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, 3,06,150 ಮೆಟ್ರಿಕ್ ಟನ್ ತೊಗರಿ, 96,498 ಮೆಟ್ರಿಕ್ ಟನ್ ಕಡಲೆ ಖರೀದಿಗೆ ಮುಂದಾಗಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ದರ ನಿಗದಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತೊಗರಿ ಖರೀದಿ ಕೇಂದ್ರ ತೆರೆಯಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರದ ಅನುಮತಿ ಬೆನ್ನಲ್ಲೇ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸುವಂತೆ ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ (Shivanand Patil) ಅಧಿಕಾರಿಗಳಿಗೆ ಸೂಜಚಿಸಿದ್ದಾರೆ ಎನ್ನಲಾಗಿದೆ.