ಬೆಂಗಳೂರು: ಹಣ್ಣುಗಳ ರಾಜ ಮಾವಿಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಾಗಿದೆ. ಹೀಗಾಗಿ ಅನ್ನದಾತ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೆರವಿಗೆ ಬರುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈಗ ರೈತರ ನೆರವಿಗೆ ಕೇಂದ್ರ ಸರ್ಕಾರ ಬಂದಿದೆ.
ರಾಜ್ಯದಲ್ಲಿ ಮಾವಿನ (Mangoes) ಬೆಲೆ ಕುಸಿತದ ಹಿನ್ನೆಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸಕಾರಾತ್ಮಕ ಒಪ್ಪಿಗೆ ಸೂಚಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ. ಗಳಂತೆ ಒಟ್ಟು 4 ರೂ. ವ್ಯತ್ಯಾಸ ಪಾವತಿಸಲು ಮುಂದಾಗಿವೆ. ಈ ಕುರಿತು ಕೇಂದ್ರಕ್ಕೆ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ವಿಡಿಯೋ ಸಂವಾದದ ಮೂಲಕ ಮನವಿ ಮಾಡಿದ್ದರು ಎನ್ನಲಾಗಿದೆ.
2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋಮವಾರ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಪ್ರಸಕ್ತ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 8 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ. ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್ಗೆ 450-550 ರೂ.ಗೆ ಕುಸಿದಿದೆ. ಹೀಗಾಗಿ ರೈತರು ಕಂಗಾಲಾಗಿದ್ದಾರೆ.