ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಸಿಇಟಿ (CET) ಪರೀಕ್ಷೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಡ್ರೆಸ್‌ಕೋಡ್ (Dresscode) ಪಾಲನೆ ಮಾಡುವಂತೆ ಕೆಇಎ ಸೂಚನೆ ನೀಡಿದೆ. ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಡ್ರೆಸ್ ಕೋಡ್ ಏನು?
- ಪುರುಷ, ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ.
- ಪುರುಷ, ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು.
- ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ.
- ಪುರುಷರು, ಜೇಬು ಇಲ್ಲದ, ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು.
- ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇಲ್ಲ.
- ಶೂ ನಿಷೇಧಿಸಲಾಗಿದೆ.
- ಮೊಬೈಲ್, ಪೆನ್‌ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.



















