ಬೆಂಗಳೂರು : ನೀವೇನಾದರೂ ಮೈಸೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 1
ಹುದ್ದೆಯ ಹೆಸರು: ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-I
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25
ನೇಮಕಾತಿ ಹೊಂದಿದವರಿಗೆ ಮಾಸಿಕ 56 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cftri.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!



















