ಚಾಮರಾಜನಗರ : ಬೈಕ್ ಡಿಕ್ಕಿಯಾಗಿ ಐವರು ವಿದ್ಯಾರ್ಥಿನಿಯರಿಗೆ ಗಾಯವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಬಳಿ ನಡೆದಿದೆ.
ಶಾಲೆ ಮುಗಿಸಿ ಮನೆಗೆ ವಿದ್ಯಾರ್ಥಿನಿಯರು ಗುಂಪಾಗಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಗುದ್ದಿದೆ ಎಂದು ತಿಳಿದುಬಂದಿದೆ. ಈ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಳ್ಳೇಗಾಲ ಪೊಲೀಸರು ಬೈಕ್ ಸವಾರನನ್ನು ವಶಕ್ಕೆ ಪಡೆದಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
ಇದನ್ನೂ ಓದಿ : ಚಲಿಸುತ್ತಿದ್ದ KSRTC ಬಸ್ ನತ್ತ ಹಾರಿದ ಯುವಕ | ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು



















