ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ತೋಟದ ಮನೆಯ ಕಾಂಪೌಂಡ್ ಒಳಗೆ ಚಿರತೆ ಪ್ರವೇಶಿಸಿರುವ ಘಟನೆ ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಸಿದ್ದಮಲ್ಲಪ್ಪ ಎಂಬುವವರ ಜಮೀನಿನಲ್ಲಿರುವ ತೋಟದ ಮನೆಯ ಸುತ್ತಮುತ್ತ ಚಿರತೆ ಓಡಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆಯ ಓಡಾಟದ ದೃಶ್ಯಗಳು ಇದೀಗ ಸ್ಥಳೀಯರಲ್ಲಿ ಭಯ ಹುಟ್ಟಿಸಿವೆ.
ತೋಟದ ಮನೆಯಲ್ಲಿ ವಾಸವಾಗಿರುವ ಕುಟುಂಬಸ್ಥರು ಭಯಭೀತರಾಗಿದ್ದು, ರಾತ್ರಿ ವೇಳೆ ಹೊರಗೆ ಬರಲು ಸಹ ಹೆದರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕೂಡ ಆತಂಕದಲ್ಲಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿ, ತಕ್ಷಣ ಚಿರತೆಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ನಿರೀಕ್ಷೆಯಿದ್ದು, ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಗದಗದಲ್ಲಿ ವಿದ್ಯುತ್ ಸ್ಪರ್ಶಕ್ಕೆ 5 ಬಿಡಾಡಿ ದನಗಳ ಸಾವು : ಸ್ಥಳೀಯರು ಆಕ್ರೋಶ


















