ಬೆಂಗಳೂರು : ನೀವೇನಾದರೂ ವಿಜಯಪುರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕರ್ನಾಟಕದ ವಿಜಯಪುರದಲ್ಲಿರುವ ಚೈತನ್ಯ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ (Chaitanya Mahila Cooperative Bank Recruitment 2026) ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10 ಜೂನಿಯರ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಚೈತನ್ಯ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್
ಹುದ್ದೆ ಹೆಸರು: ಜೂನಿಯರ್ ಅಸಿಸ್ಟಂಟ್ ಇತ್ಯಾದಿ
ಒಟ್ಟು ಹುದ್ದೆಗಳು: 10
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 10
5 ಜೂನಿಯರ್ ಅಸಿಸ್ಟಂಟ್ ಹಾಗೂ 5 ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿ.ಇ ಕೋರ್ಸ್ ಮುಗಿಸಿದವರಿಗೆ ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cmsbank.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Chaitanya Women’s Cooperative Bank Limited, Vijayapura, Meenakshi Chowk, Mirde Galli, Vijayapura – 586101
ಇದನ್ನೂ ಓದಿ : ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆ | ದೂರು ದಾಖಲು


















