ರಾಮನಗರ: ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ಮಧ್ಯೆ ಗಲಾಟೆ ನಡೆದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದರು. ಈ ವಿಚಾರ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ.
ವರ್ಗಾವಣೆ ಹಣ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಲುವರಾಯಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದರು. ಈ ವಿಷಯವಾಗಿ ಕಿಡಿಕಾರಿರುವ ಚಲುವರಾಯಸ್ವಾಮಿ, ಗಲಾಟೆ ನಡೆದಿಲ್ಲ. ವರ್ಗಾವಣೆ ವಿಚಾರ ಇಟ್ಟುಕೊಂಡು ಅವರು ಬಂದಿರಲಿಲ್ಲ. ಕುಮಾರಸ್ವಾಮಿ ಇದನ್ನು ಚಪಲಕ್ಕೆ ಹೇಳಿದ್ದಾರೆ. ಕುಮಾರಸ್ವಾಮಿಗೆ ಮಾತಾಡದೆ ಹೋದರೆ, ನಿದ್ದೆ ಬರಲ್ಲ. ಮಾತಿನ ಚಪಲ ಜಾಸ್ತಿ ಅವರಿಗೆ ಎಂದು ಆರೋಪಿಸಿದ್ದಾರೆ.
ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ದಂಧೆ ವಿಚಾರವಾಗಿಯೇ ಮೈಸೂರಿನಲ್ಲಿ ಸಚಿವರು, ಮತ್ತಿತರರು ಹೊಡೆದಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಒಬ್ಬ ಸಚಿವರನ್ನು ಬಹಿರಂಗವಾಗಿ ಹೊಡೆದಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.