ಚಾಮರಾಜನಗರ: ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೋನಿಯಲ್ಲಿ ನಡೆದಿದೆ.
ಗ್ರಾಮದ ಚನ್ನಮ್ಮ ಎಂಬುವವರಿಗೆ ಸೇರಿದ ಹಸು ಎಂದು ತಿಳಿದುಬಂದಿದೆ. ಕೊಟ್ಟಿಗೆಯಲ್ಲಿದ್ದ ಹಸುವನ್ನು ಮೇಯಲು ಹೊರಗೆ ಬಿಟ್ಟಿದ್ದರು. ಆ ವೇಳೆ ಮೇಯುತ್ತಿದ್ದ ಹಸುವಿನ ಮೇಲೆ ಏಕಾಏಕಿ ಹುಲಿ ದಾಳಿ ನಡೆಸಿದೆ.
ಈ ಕುರಿತು ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಇದೀಗ ಹುಲಿ ಸೆರೆಹಿಡಿಯಲು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.