ಬೆಂಗಳೂರು: ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 25 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟೈಪಿಸ್ಟ್, ಪ್ಯೂನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (Chamarajanagara District Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಚಾಮರಾಜನಗರದಲ್ಲಿಯೇ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಚಾಮರಾಜನಗರ
ಹುದ್ದೆಗಳ ಹೆಸರು: ಟೈಪಿಸ್ಟ್, ಪ್ಯೂನ್ ಇತ್ಯಾದಿ
ಹುದ್ದೆಗಳ ಸಂಖ್ಯೆ: 25
ಉದ್ಯೋಗ ಸ್ಥಳ: ಚಾಮರಾಜನಗರ
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 13
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 2 ಸ್ಟೆನೋಗ್ರಾಫರ್, 6 ಟೈಪಿಸ್ಟ್, 4 ಟೈಪಿಸ್ಟ್ ಆ್ಯಂಡ್ ಕಾಪಿಯಿಸ್ಟ್ ಹಾಗೂ 13 ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ chamarajanagara.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ



















