ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hill) ಚಾಮುಂಡೇಶ್ವರಿ ತಾಯಿಗೆ ಭಕ್ತರು ನೀಡುವ ಸೀರೆಗಳನ್ನೂ ಮಾರಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ವಿರುದ್ಧ ದೂರು ದಾಖಲಾಗಿದೆ.
ಅಧಿಕಾರಿಗಳು ತಾಯಿಯ ಸೀರೆಯನ್ನೂ ಮಾರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೇವಾಲಯದ ಕಾರ್ಯದರ್ಶಿ ರೂಪಾ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ
ರೂಪ ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಸೀರೆಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ವಿಡಿಯೋವನ್ನು ಹರಿಬಿಡಲಾಗಿತ್ತು. ಆದರೆ, ರೂಪ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದು, ಅವುಗಳು ಸೀರೆಯಲ್ಲ, ಕಡತಗಳು ಎಂದು ಹೇಳಿದ್ದರು.