ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟಿಸಲು ಆಹ್ವಾನಿಸಿರುವುದನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಚಾಮುಂಡಿ ಬೆಟ್ಟ ಚಲೋ ಬೆಂಬಲಿಸಿ ಆಗಮಿಸಿದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ಹಿಂದೂ ನಾಯಕರನ್ನು ತಡೆದು ಸಿಎಆರ್ ಹಾಗೂ ಆಲನಹಳ್ಳಿ ಠಾಣೆಗೆ ಕರೆದೊಯ್ದರು.
ಅಲನಹಳ್ಳಿ ಠಾಣೆಯ ಮುಂಭಾಗ ಹಿಂದೂ ಕಾರ್ಯಕರ್ತರು ಭಜನೆ ಹಾಡಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.