ಬೆಂಗಳೂರು: ಮುಸ್ಲಿಂರಿಗೆ ಮತದಾನ ಹಕ್ಕು ರದ್ದುಗೊಳಿಸಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾಧಿಸಿದ್ದಾರೆ.
ರೈತರಿಗೆ ಅನ್ಯಾಯ ಆಗುತ್ತಿರುವ ಕುರಿತಾದ ವೇದಿಕೆಯಲ್ಲಿ ನಾನು ಮಾತನಾಡಿದ್ದೆ. ವಕ್ಫ್ ಬೋರ್ಡ್ ನಿಂದ ರೈತರಿಗೆ ತೊಂದರೆ ಆಗುತ್ತಿದೆ ಎಂಬ ಕಾರಣಕ್ಕೆ ಇತ್ತು. ಆ ಸಂದರ್ಭದಲ್ಲಿ ನಾನು ಹಾಗೆ ಮಾತನಾಡಿದ್ದೆ. ಅದು ಬಾಯಿ ತಪ್ಪಿ ಆಡಿದ ಮಾತಾಗಿತ್ತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಂರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ಹೀಗಾಗಿ ಈ ವಿಚಾರವನ್ನು ಇಲ್ಲಿಗೆ ಬಿಡಿ ಮುಂದುವರಿಸಬೇಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.
ರೈತರಿಗೆ ವಕ್ಫ್ ಬೋರ್ಡ್ ನೋಟೀಸ್ ನೀಡುತ್ತಿರುವುದನ್ನು ವಿರೋಧಿಸಿ ನಗರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರಲ್ಲಿ ಚಂದ್ರಶೇಖರನಾಥ ಸ್ವಾಮೀಜಿಯೂ ಭಾಗವಹಿಸಿದ್ದರು. ಮುಸ್ಲಿಮರಿಗೆ ಮತದಾನ ಹಕ್ಕು ನಿರಾಕರಿಸಿದರೆ ಭಾರತೀಯರೆಲ್ಲರೂ ನೆಮ್ಮದಿಯಾಗಿರಬಹುದು ಎಂದು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.