ಬೆಂಗಳೂರು: ಅತಿಥಿ ಉಪನ್ಯಾಸಕರ ಕೊರತೆಯಿಂದ ತರಗತಿ ನಡೆಯದ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ ಕಾಲೇಜುಗಳ 2025-26ರ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

ತಾಂತ್ರಿಕ ಶಿಕ್ಷಣ ಹೊರತು ಪಡಿಸಿ ಉಳಿದೆಲ್ಲಾ ಪದವಿ ಕಾಲೇಜುಗಳ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪ್ರತಿಯೊಂದು ವಿಶ್ವವಿದ್ಯಾಲಯಕ್ಕೂ ಸೆಮಿಸ್ಟರ್‌ನ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿದ್ದು, ಮದ್ಯಂತರ ರಜಾ ಅವಧಿಯನ್ನು ಕಡಿತಗೊಳಿಸಿ ಮುಂದಿನ ಸೆಮಿಸ್ಟರ್ ಆರಂಭಿಸಲು ಸೂಚನೆ ನೀಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಅಳವಡಿಸುವಂತೆ ಸರ್ಕಾರ ಆದೇಶ ಮಾಡಿದೆ.