ಬೆಂಗಳೂರು: ನೀವು ಈಗಷ್ಟೇ ವಾಣಿಜ್ಯ ಕೋರ್ಸ್ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನಲ್ಲಿ (Chartered Sahakari Bank Recruitment 2026) ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಚಾರ್ಟರ್ಡ್ ಸಹಕಾರಿ ಬ್ಯಾಂಕ್
ಒಟ್ಟು ಹುದ್ದೆಗಳು: 9
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟಂಟ್, ಡ್ರೈವರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 18
ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 76 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ csbank.in ಭೇಟಿ ನೀಡಿ ಅಧಿಸೂಚನೆ ಸೇರಿ ವಿವಿಧ ಮಾಹಿತಿ ಪಡೆಯಬಹುದು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Chartered Cooperative Bank Limited, No-1, 1st Main Road, 1st Block, Koramangala, Bangalore – 560034
ಇದನ್ನೂ ಓದಿ : ಕೌಶಲ ಅಭಿವೃದ್ಧಿ ನಿಗಮದಲ್ಲಿ 665 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ



















