ಹುಬ್ಬಳ್ಳಿ: ಲವ್ ಜಿಹಾದ್ ಹೆಸರಿನಲ್ಲಿ ಹಿಂದು ಯುವತಿಯರಿಗೆ ಮೋಸವಾಗಬಾರದು ಎಂಬ ಕಾರಣಕ್ಕೆ ಶ್ರೀರಾಮ ಸೇನಾದ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸಹಾಯವಾಣಿ ತೆರೆದಿರುವುದಾಗಿ ಹೇಳಿದ್ದಾರೆ.
ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಸಹಾಯವಾಣಿಯನ್ನು ಹುಬ್ಬಳ್ಳಿಯಲ್ಲಿರುವ ನಮ್ಮ ಸೇನಾದ ಕೇಂದ್ರ ಕಚೇರಿಯಿಂದ ನಿರ್ವಹಣೆ ಮಾಡಲಾಗುವುದು. ವಕೀಲರು, ಮಹಿಳಾ ಆಪ್ತಸಮಾಲೋಚಕರ ಐವರ ತಂಡ ಇದಕ್ಕಾಗಿ ಕಾರ್ಯ ನಿರ್ವಹಿಸಲಿದೆ. ಹಿಂದೂ ಯುವತಿಯರು ಮತ್ತು ಮಹಿಳೆಯರು ಸಹಾಯವಾಣಿ ಸಂಖ್ಯೆ 9090443444ಗೆ ದಿನದ 24ತಾಸು ಕರೆ ಮಾಡಿದರೆ ಅವರ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಕರೆ ಮಾಡಿದವರಿಗೆ ಆಪ್ತ ಸಮಾಲೋಚನೆ ಮೂಲಕ ಧೈರ್ಯ ತುಂಬಲಾಗುವುದು. ಹಿಂದೂ ಮಹಿಳೆಯರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬಾರದು ಎಂಬ ನಿಟ್ಟಿನಲ್ಲಿ ಈ ಕಾರ್ಯ ಮಾಡಲಾಗುತ್ತಿದೆ. ಇಸ್ಲಾಂನಲ್ಲಿ ಮಹಿಳೆಯರಿಗೆ ಗೌರವ, ರಕ್ಷಣೆ ಇಲ್ಲ. ಹಿಂದೂ ಯುವತಿಯರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಮುಸ್ಲಿಂರು ಹಿಂದೂ ಯುವತಿಯರಿಗೆ ತೊಂದರೆ ಕೊಟ್ಟರೆ ನಾವು ಕೋರ್ಟ್‌ಗೆ ಹೋಗಲ್ಲ. ಬದಲಾಗಿ ನಾವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಕೂಡ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.