ಮೈಸೂರು: ಮೇಕೆ, ಹಸುಗಳನ್ನು ತಿಂದು ಗ್ರಾಮಸ್ಥರಿಗೆ ಭಯ ಹುಟ್ಟಿಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಎಲ್.ಡಿ. ಎಫ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ದೊಡ್ಡ ಮುಲಗೂಡು ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ಇತ್ತೀಚೆಗೆ ನಿರಂತರ ದಾಳಿ ನಡೆಸಿದ್ದ ಚಿರತೆಗೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು.
ಆತಂಕಗೊಂಡ ಗ್ರಾಮಾಸ್ಥರು ಅರಣ್ಯ ಇಲಾಖೆಯವರಿಗೆ ಚಿರತೆಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿದ್ದ ಹಿನ್ನಲೆ, ಗ್ರಾಮದ ಹೊರವಲಯದಲ್ಲಿ ಎಲ್.ಡಿ. ಎಫ್ ಸಿಬ್ಬಂದಿ ಬೋನು ಇರಿಸಿದ್ದರು. ಇದೀಗ ಚಿರತೆ ಬೋನಿಗೆ ಬಿದ್ದಿದ್ದು, ಎಲ್.ಡಿ. ಎಫ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.