ಕಲಬುರಗಿ: ಜಿಲ್ಲೆಯ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.
ಕಾರು ಸ್ಫೊಟಿಸುವ ಮೂಲಕ ಅನಿತಾ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಕಲಬುರಗಿ ನಗರದ ಪೊಲೀಸ್ ಇನ್ಸ್ಪೆಕ್ಟರ್ ಮೊಬೈಲ್ ಗೆ ಈ ಬೆದರಿಕೆಯ ಆಡಿಯೋ ಸಂದೇಶ ಬಂದಿದೆ. ಬೆದರಿಕೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅನಿತಾ, ಸಿಸಿಟಿವಿ ಕಣ್ಗಾವಲಿನಲ್ಲೇ ಕಾರು ಪಾರ್ಕ್ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಒಂದೂವರೆ ತಿಂಗಳ ಹಿಂದೆಯಷ್ಟೆ ಅನಿತಾ ಕಲಬುರಗಿ ಜೈಲಿಗೆ ವರ್ಗಾವಣೆಯಾಗಿ ಬಂದಿದ್ದಾರೆ. ಅಧಿಕಾರ ಸ್ವೀಕಾರ ಮಾಡಿದ ದಿನವೇ ಜೈಲಿನಲ್ಲಿ ಕೈದಿಗಳು ಹೈಫೈ ಜೀವನ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಅನಿತಾ ಅವರು ಕಠಿಣ ನಿಯಮ ಜಾರಿಗೊಳಿಸಿದ್ದರು.
ಇದರಿಂದ ಆಕ್ರೋಶಗೊಂಡ ಕೈದಿಗಳು, ಈ ರೀತಿ ಸಂದೇಶ ಕಳುಹಿಸಿದರೆ ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.