ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS Chikkaballapur Recruitment 2025) 51 ವೈದ್ಯರು, ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆನ್ ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ chikkaballapur.nic.in ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 27 ಕೊನೆಯ ದಿನವಾಗಿರುವ ಕಾರಣ ಇಂದೇ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಚಿಕ್ಕಬಳ್ಳಾಪುರ
ಹುದ್ದೆ ಹೆಸರು: ವೈದ್ಯರು, ಸ್ಟಾಫ್ ನರ್ಸ್ ಇತ್ಯಾದಿ
ಒಟ್ಟು ಹುದ್ದೆ: 51
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 27
ಎಂಬಿಬಿಎಸ್ ಡಾಕ್ಟರ್, ಆಯುಷ್ ಮೆಡಿಕಲ್ ಆಫೀಸರ್, ಸೀನಿಯರ್ ಟಿ.ಬಿ ಸೂಪರ್ ವೈಸರ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್, ಸ್ಟಾಫ್ ನರ್ಸ್, ಎಕ್ಸ್ ರೇ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಕನಿಷ್ಠ 40ರಿಂದ 65 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಚಿಕ್ಕಬಳ್ಳಾಪುರದಲ್ಲೇ ಉದ್ಯೋಗ ಪಡೆಯಬೇಕು ಎನ್ನುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಡಿಎಸ್, ಬಿಎಸ್ಸಿ, ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬೆಳಗಾವಿ | ವರ್ಕ್ ಫ್ರಂ ಹೋಮ್ ಹೆಸರಲ್ಲಿ 8 ಸಾವಿರ ಮಹಿಳೆಯರಿಗೆ 12 ಕೋಟಿ ರೂ. ವಂಚಿಸಿ ಪರಾರಿಯಾದ ಭೂಪ!

















