ಪೊಲೀಸ್ ವಸತಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ನಡೆದಿದೆ.
ರಾಜಶೇಖರ್( 46) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ . ಕುಟುಂಬ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಎರಡು ವರ್ಷಗಳಿಂದ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತಿದ್ದ ರಾಜಶೇಖರ್, ಪೊಲೀಸ್ ಠಾಣೆ ಹಿಂಬಾಗ ಇರುವ ಪೊಲೀಸ್ ಕ್ವಾಟರ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಅವರ ಮೃತದೇಹದ ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸೆ, ಎಎಸ್ಪಿ ಜಗನ್ನಾಥ್ ರೈ ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.