ಚಿಕ್ಕಬಳ್ಳಾಪುರ : ಕಂಟೈನರ್ ಟ್ರಕ್‌ಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಅಗಲಗುರ್ಕಿ ಗ್ರಾಮದ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ ಒರಿಸ್ಸಾ ಮೂಲದ ಸುಹಾಸ್ ಎಂಬಾತ ಸಾವನ್ನಪ್ಪಿದ್ದು, ಪ್ರೇಮ್ ಕುಮಾರ್ ಮತ್ತು ಮುನಿದ್ ಯಾದವ್ ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಡಿಕ್ಕಿ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಈ ಬಸ್ ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳಿತ್ತು ಎನ್ನಲಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಬಸ್‌ನಲ್ಲಿ ಸಿಲುಕಿ ನರಳಾಡಿದ ಪರಿಸ್ಥಿತಿ ಕೂಡ ಎದುರಾಗಿದೆ. ಬಸ್ನಿಂದ ಆಚೆ ಬರಲಾಗದೆ ಪರದಾಡಿದ್ದಾನೆ. ಬಳಿಕ ಸ್ಥಳೀಯರ ಸಹಾಯದಿಂದ ಪ್ರಯಾಣಿಕನ ರಕ್ಷಣೆ ಮಾಡಲಾಗಿದೆ.
ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗಿದೆ.
ಇದನ್ನೂ ಓದಿ : ಮನೆ ಮುಂದೆ ಹಾರ್ನ್ ಹೊಡೆದಿದ್ದಕ್ಕೆ ಚಾಕುವಿನಿಂದ ಹಲ್ಲೆ | ತಂದೆ-ಮಗನ ಸ್ಥತಿ ಗಂಭೀರ!



















