ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂಎಲ್ಸಿ ಸಿ.ಟಿ ರವಿ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿರುವ ಎಂಎಲ್ಸಿ ಸಿ.ಟಿ ರವಿ ಇದೀಗ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಕೊಪ್ಪ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿರುವ ದಿನೇಶ್ ಹೊಸೂರು ಅವರಿಗೆ ಉಪಾಧ್ಯಕ್ಷ ಸ್ಥಾನ ಲಭಿಸಿದೆ.
ಡಿಸಿಸಿ ಬ್ಯಾಂಕ್‌ನಲ್ಲಿ ಒಟ್ಟು 13 ನಿರ್ದೇಶಕ ಸ್ಥಾನಗಳಿದ್ದು, ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಕೊಪ್ಪದ ದಿನೇಶ್ ಹೊಸೂರು ಅವರು ಕಡೂರು ಶಾಸಕ ಕೆ.ಎಸ್. ಆನಂದ್ ವಿರುದ್ಧ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ.
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಚಿಕ್ಕಮಗಳೂರು ನಗರದ ರತ್ನಗಿರಿ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಘೋಷಣೆ ಕೂಗುವ ಮೂಲಕ ಕಾರ್ಯಕರ್ತರು ತಮ್ಮ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಒಳ್ಳೆ ಬುದ್ಧಿವಂತ, ಕಷ್ಟ ಅಂದವರಿಗೆ ಬೇಗ ಸ್ಪಂದಿಸುವ ವ್ಯಕ್ತಿ ರಾಯ್ | ವೈ.ಎ ನಾರಾಯಣ ಸ್ವಾಮಿ ಸಂತಾಪ



















