ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿರುವ ಪರಿಣಾಮ 8 ಮಂದಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಗ್ರಾಮದ ಬಳಿ ನಡೆದಿದೆ.
ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಈ ಬಸ್ಸಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಕುಕನೂರಿನಿಂದ-ಧರ್ಮಸ್ಥಳಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ಗಾಯಗೊಂಡ ಪ್ರಯಾಣಿಕರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಹಾಸನ : ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯ ಶವ ಪತ್ತೆ..!



















