ಚಿಕ್ಕಮಗಳೂರು: ಹಿಂದು ಸಮಾಜೋತ್ಸವಕ್ಕೆ ಸಂಬಂಧಿಸಿದ ಬ್ಯಾನರ್ ಹಾಗೂ ಕೇಸರಿ ಬಾವುಟಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಹಿಂದು ಸಮಾಜೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿ ಕಟ್ಟಲಾಗಿದ್ದ ಕೇಸರಿ ಬಾವುಟ ಹಾಗೂ ಬ್ಯಾನರ್‌ಗಳನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎನ್ನಲಾಗಿದೆ. ಈ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೋಳೂರು ಗ್ರಾಮದಲ್ಲಿ ನಡೆದಿದೆ.
ನಾಳೆ ಮರಿಗೇಬೈಲು ಎಂಬಲ್ಲಿ ಹಿಂದು ಸಮಾಜೋತ್ಸವ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಅದಕ್ಕೆ ಮುನ್ನ ನಡೆದ ಈ ಕೃತ್ಯದಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಘಟನಾ ಸಂಬಂಧ ಹಿಂದು ಸಮಾಜೋತ್ಸವ ಸಮಿತಿ ಅಧ್ಯಕ್ಷ ಪ್ರದೀಪ್ ಚೋಳರಮನೆ ಅವರು ಶೃಂಗೇರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೀಗ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಉದ್ಯಮಿ ಮೋಹನ್ ದಾಸ್ ಪೈ v/s ಸಚಿವ ರಾಮಲಿಂಗಾರೆಡ್ಡಿ ಎಕ್ಸ್ ವಾರ್ | ಸಾರಿಗೆ ವ್ಯವಸ್ಥೆ ಕುರಿತು ಭಾರೀ ಚರ್ಚೆ



















