ಚಿಕ್ಕಮಗಳೂರು : ಮೆಕ್ಕೆಜೋಳ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನಲ್ಲಿ ನಡೆದಿದೆ.
ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆಗಳ ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಅರಸೀಕೆರೆ ತಾಲೂಕಿನ ಜಾವಗಲ್‌ನಿಂದ ಉಡುಪಿಯ ಕುಂದಾಪುರಕ್ಕೆ ಹೋಗುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಾರಿಯಲ್ಲಿದ ಮೆಕ್ಕೆಜೋಳ ಸಂಪೂರ್ಣ ಸುಟ್ಟು ಬೂದಿಯಾಗಿದೆ. ಅದೃಷ್ಟಾವಶಾತ್ ಲಾರಿಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸದ್ಯ ಈ ಘಟನೆಯು ಶಾರ್ಟ್ ಸರ್ಕ್ಯೂಟ್‌ನಿಂದ ಆಗಿರುವುದೆಂದು ಶಂಕೆ ವ್ಯಕ್ತವಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ಅತಿಯಾದ ಗಾಳಿಯಿಂದಾಗಿ ಅರಣ್ಯ ಪ್ರದೇಶಕ್ಕೂ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳವು ಬೆಂಕಿ ನಂದಿಸಲು ಮುಂದಾಗಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ | ಡೆಲಿವರಿ ಬಾಯ್ ಅರೆಸ್ಟ್



















