ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಒಂದೇ ಏರಿಯಾದಲ್ಲಿ 8 ಜನರ ಮೇಲೆ ಬೀದಿ ನಾಯಗಳು ದಾಳಿ ನಡೆಸಿದ ಘಟನೆ ನಗರದ ಹೌಸಿಂಗ್ ಬೋರ್ಡ್ ಬಳಿ ನಡೆದಿದೆ.
ಬೀದಿ ನಾಯಿಗಳ ಹಾವಳಿಗೆ 3 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ. ಸದ್ಯ, 8 ಜನರಿಗೆ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, 3 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.