ಮಂಡ್ಯ : ಸರ್ಕಾರಿ ಶಾಲೆಗಳು ಪುನರಾರಂಭವಾದ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕೆಂಪಯ್ಯನದೊಡ್ಡಿ ಗ್ರಾಮದಲ್ಲಿ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಈ ಆಂದೋಲನಕ್ಕೆ ಬಿಇಒ ಉಮಾ ಚಾಲನೆ ನೀಡಿದ್ದು. ಒಂದನೇ ತರಗತಿಗೆ ದಾಖಲಾದ ಮಕ್ಕಳನ್ನು ಎತ್ತಿನಗಾಡಿಯಲ್ಲಿ ಕೂರಿಸಿ ಸರಸ್ವತಿ ಭಾವಚಿತ್ರಿ ಇರಿಸಿ ಮೆರವಣಿಗೆ ನಡೆಸಲಾಯಿತು. ಆಂದೋಲನದಲ್ಲಿ ಸರ್ಕಾರಿ ಶಾಲೆಯ ಮಕ್ಕಳು, ಶಿಕ್ಷಕರು ಪಾಲ್ಗೊಂಡಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.