ಕಲಬುರಗಿ : ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ವಿಪರೀತವಾಗುತ್ತಿದೆ. ಇಂತಹ ಘಟನೆಗಳು ಅಲ್ಲಲ್ಲಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಬೀದಿ ನಾಯಿಗಳು ಮಕ್ಕಳು, ವೃದ್ಧರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದು ಕೂಡ ಆತಂಕಕ್ಕೆ ಕಾರಣವಾಗುತ್ತಿದೆ.
ಕಲಬುರಗಿ ನಗರದ ದೇವಿನಗರ ಬಡಾವಣೆಯಲ್ಲಿ 5 ಮಕ್ಕಳ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆಯೇ ಬೀದಿ ನಾಯಿ ದಾಳಿ ಮಾಡಿವೆ.
ನಾಯಿ ದಾಳಿ ವೇಳೆ ಕಣ್ಣು, ಕಿವಿ, ಎದೆ ಭಾಗಗಳಿಗ ಗಂಭೀರವಾಗಿ ಗಾಯಗಳಾಗಿವೆ. ನಾಯಿ ದಾಳಿಗೆ ಒಳಗಾದ ಮಕ್ಕಳನ್ನು ಜೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೂಡಲೇ ಬೀದಿ ನಾಯಿಗಳ ಹಾವಳಿ ತಡೆಯುವಂತೆ ಪಾಲಿಕೆ ಅಧಿಕಾರಿಗಳಿಗೆ ಜನರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್



















