ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಮೊಟೊ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಈ ವಿಷಯವಾಗಿ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಿ ಇಂದು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ತನಿಖೆಯ ಪ್ರಗತಿ ಬಗ್ಗೆ ಎಜಿ ಶಶಿಕಿರಣ್ ಶೆಟ್ಟಿ ವರದಿ ಸಲ್ಲಿಸಲಿದ್ದಾರೆ.
ಕಾಲ್ತುಳಿತ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಘಟನೆ ಸಂಬಂಧ ಏನು ಕ್ರಮ ಕೈಗೊಳ್ಳಲಾಗಿದೆ? ಕಾರ್ಯಕ್ರಮ ಆಯೋಜನೆ ವೇಳೆ ಏನೆಲ್ಲಾ ಮುಂಜಾಗ್ರತೆ ವಹಿಸಲಾಗಿತ್ತು? ಘಟನೆ ನಂತರ ಏನೆಲ್ಲಾ ಕ್ರಮ ಆಗಿದೆ? ಎಂಬ ವರದಿಯನ್ನು ಹೈಕೋರ್ಟ್ ಕೇಳಿತ್ತು. ಇಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರದ ಪರ ವಕೀಲರು ವರದಿ ಸಲ್ಲಿಸಲಿದ್ದಾರೆ.