ಬೆಂಗಳೂರು: ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಈಗ ಮತ್ತೊಂದು ಆಘಾತ ಎದುರಾಗಿದೆ. ಕಪ್ ಗೆದ್ದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆಗೆ ತಯಾರಿ ಮಾಡಿಕೊಳ್ಳಲಾಗಿತ್ತು. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಇಲ್ಲಿಯವರೆಗೆ 7 ಜನ ಸಾವನ್ನಪ್ಪಿದ್ದಾರೆ.
ಕಾಲ್ತುಳಿತದಲ್ಲಿ 20ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ ಇನ್ನೂ ಹಲವರು ಗಂಭೀರವಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿದಂತೆ 7 ಜನ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಅವರೊಂದಿಗೆ ಬಂದಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.