ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ಬಾಡಿ ವಾರಂಟ್ ಮೇಲೆ ಬಂಧಿತ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋರ್ಟ್ ಅನುಮತಿ ಪಡೆದು ಬಾಡಿ ವಾರೆಂಟ್ ಮೇಲೆ ನಾಲ್ವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಈ ವಿಷಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
ಕಾಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಈ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿ, 60ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.