ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭವಾಗಿದೆ. ಈ ಮಧ್ಯೆ ಮಾನವ ಹಕ್ಕುಗಳ ರಕ್ಷಣಾ ಆಯೋಗದ ಬಳಿಕ ಮಕ್ಕಳ ಹಕ್ಕುಗಳ ಆಯೋಗ ಎಂಟ್ರಿ ಕೊಟ್ಟಿದೆ.
ಕಾಲ್ತುಳಿತ ಪ್ರಕರಣದಲ್ಲಿ ಇಬ್ಬರು ಮಕ್ಕಳ ಸಾವನ್ನಪ್ಪಿ ಸುಮಾರು 20ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಸಂಭ್ರಮಾಚರಣೆಯಲ್ಲಿ ಮಕ್ಕಳಿಗಾದ ತೊಂದರೆ ಆದ ಬಗ್ಗೆ ಮಾಹಿತಿ ನೀಡುವಂತೆ ಸಿಒಡಿಗೆ ಪತ್ರ ಬರೆಯಲಾಗಿದೆ. ಅಲ್ಲದೇ, ಗಾಯಗೊಂಡಿರುವ ಮಕ್ಕಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ ಎಂದು ಮಕ್ಕಳ ಆಯೋಗದ ಸದಸ್ಯ ಶಶಿಧರ ಕೊಸುಂಬೆ ಹೇಳಿದ್ದಾರೆ.