ಚಿತ್ರದುರ್ಗ: ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು ಹಾಗೂ ಹಸುಗಳನ್ನು ಬಜರಂಗದಳ ಕಾರ್ಯಕರ್ತರು ತಡೆದು ರಕ್ಷಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ನಗರದ ಮಲ್ಲಾಪುರ ಗೊಲ್ಲರ ಹಟ್ಟಿ ಹೈವೇ ಸಮೀಪ ಮಧ್ಯರಾತ್ರಿ ಗೋವುಗಳ ಸಾಗಾಟ ನಡೆಯುತ್ತಿರುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 4 ಎತ್ತುಗಳು ಹಾಗೂ 12 ಹಸುಗಳನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಸೂಚನೆ ಪಡೆದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಇಬ್ಬರು ಚಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು



















