ಚಿತ್ರದುರ್ಗ: ನಟ ದರ್ಶನ್ ಮತ್ತು ಅವರ ಗ್ಯಾಂಗ್‌ನಿಂದ ಹತ್ಯೆಗೊಳಗಾದ ಚಿತ್ರದುರ್ಗ ರೇಣುಕಸ್ವಾಮಿ ಮನೆಗೆ ನಿನ್ನೆ ಭಾನುವಾರ ಸಂಜೆ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ಕುಟುಂಬಸ್ಥರ ಯೋಗಕ್ಷೇಮ ವಿಚಾರಿಸಿ ಸಾಂತ್ವಾನ ಮಾಡಿದ್ದಾರೆ ಹಾಗೂ ಕುಟುಂಬಕ್ಕೆ ವೈಯಕ್ತಿಕವಾಗಿ 1ಲಕ್ಷ ಆರ್ಥಿಕ ಸಹಾಯ ಮಾಡಿದ್ದಾರೆ.
ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ನೀಡುವ ಬಗ್ಗೆ ಪೊಷಕರ ಮನವಿ ಮಾಡಿದ ಹಿನ್ನಲೆ ಈ ಕುರಿತು ಸಿಎಂಗೆ ವಿಷಯ ತಿಳಿಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ