ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಶಾಸಕ ಬೈರತಿ ಬಸವರಾಜ್ ಅವರನ್ನು ಮೆಡಿಕಲ್ ಪರೀಕ್ಷೆಗೆ ನಗರದ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಸ್ಥಳದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಆಸ್ಪತ್ರೆಯ ಎರಡು ಪ್ರವೇಶ ದ್ವಾರಗಳಲ್ಲಿಯೂ ಪೊಲೀಸರು ಅಲರ್ಟ್ ಆಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಕಣ್ಗಾವಲು ವಹಿಸಿದ್ದಾರೆ. ಮೆಡಿಕಲ್ ಟೆಸ್ಟ್ ಪೂರ್ಣಗೊಂಡ ಬಳಿಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಶಾಸಕ ಬೈರತಿ ಬಸವರಾಜ್‌ನ್ನು ಸಿಐಡಿ ಟೀಂ ಇಂಡಿಗೋ–6E683 ವಿಮಾನದಲ್ಲಿ ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದಾಗ ಬಂಧಿಸಿದ್ದರು.
ಇದನ್ನೂ ಓದಿ : ವೈದ್ಯಧಿಕಾರಿಯನ್ನೇ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ರಾ ಸಿಎಂ ಸಿದ್ದು? ಸುನಿಲ್ ಕುಮಾರ್ ಬಾಂಬ್



















