ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ (CISF Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಹಾಗೂ ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)
ಹುದ್ದೆ ಹೆಸರು: ಪ್ಯಾರಾ ಮೆಡಿಕಲ್ ಸ್ಟಾಫ್
ಒಟ್ಟು ಹುದ್ದೆ: 24
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 7
ಅರ್ಜಿ ಸಲ್ಲಿಸಲು ಬಯಸುವವರು ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪಿಯುಸಿ, ಡಿಪ್ಲೋಮಾ ಹಾಗೂ ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 28 ವರ್ಷಗಳ ಗರಿಷ್ಠ ಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 92,300 ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cisf.gov.in ಗೆ ಭೇಟಿ ನೀಡಬೇಕು.
ಪ್ಯಾರಾ ಮೆಡಿಕಲ್ ಸ್ಟಾಫ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ



















