ಬೆಂಗಳೂರು: ಮೆಟ್ರೋ ದರ ಏರಿಕೆ ವಿರೋಧಿಸಿ ಹಾಗೂ ದರ ಏರಿಕೆಯಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿ ನಾಗರಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ಉಳಿಸಿ ಸಮಿತಿ ಹಾಗೂ ಬೆಂಗಳೂರು ಮೆಟ್ರೋ ಪ್ರಯಾಣಿಕರು ಸಂಘದಿಂದ ಈ ಸಮಾವೇಶ ಆಯೋಜಿಸಲಾಗಿದೆ. CID ರಸ್ತೆಯಲ್ಲಿ ಇರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಸಮಾವೇಶ ನಡೆಯಿತು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಧಿಕಾರಿಗಳು ಸೇರಿದಂತೆ ಅನೇಕ ತಜ್ಞರು ಭಾಗಿಯಾಗಿದ್ದರು. ದರ ಏರಿಕೆ ವಿಚಾರ ಇಂದು ಚರ್ಚೆ ಜೊತೆಗೆ ಮುಂದಿನ ದಿನಗಳಲ್ಲಿ ಹೋರಾಟದ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ.
ಈ ಸಮಾವೇಶದಲ್ಲಿ ಮೆಟ್ರೋ ಬಾಯ್ಕಟ್ ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಫೆಬ್ರವರಿ ಕೊನೆಯ ವಾರದಲ್ಲಿ ಒಂದು ದಿನ ಅಥವಾ ಒಂದು ವಾರವಾದರೂ ಮೆಟ್ರೋ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣ ಮಾಡದೆ, ಮೆಟ್ರೋಗೆ ಬಿಸಿ ಮುಟ್ಟಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಿಕರ ವೇದಿಕೆ ಪ್ರಯಾಣಿಕರ ಸಹಿ ಸಂಗ್ರಹ ಮಾಡಿದೆ.