ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಮಧ್ಯೆ ಘರ್ಷಣೆ ನಡೆದಿರುವ ಘಟನೆ ನಡೆದಿದೆ.
ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡಿನಲ್ಲಿ ನ. 13 ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ರೋಡ್ ಶೋ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಮಧ್ಯೆ ಘರ್ಷಣೆ ನಡೆದಿರುವ ಕುರಿತು ವರದಿಯಾಗಿದೆ.
ಪ್ರಿಯಾಂಕಾ ಗಾಂಧಿ ಅವರು ರೋಡ್ ಶೋ ವೇಳೆ ಸಾರ್ವಜನಿಕರ ಮಧ್ಯೆ ಇದ್ದರು. ಆಗ ಕಾಂಗ್ರೆಸ್ ಕಾರ್ಯಕರ್ತರು ಜಯಘೋಷ ಹೇಳುತ್ತಿದ್ದರು. ಈ ವೇಳೆ ಸಂಘರ್ಷ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಿಆರ್‌ಪಿಎಫ್ ಭದ್ರತಾ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಾರೆ ಎನ್ನಲಾಗಿದೆ. ಆನಂತರ ಅಲ್ಲಿದ್ದವರು ಮಧ್ಯಪ್ರವೇಶಿಸಿ ಸಂಘರ್ಷ ತಿಳಿಗೊಳಿಸಿದ್ದಾರೆ.