ಶತೃ ರಾಷ್ಟ್ರ ಪಾಕ್ ನಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, 30 ಜನ ಸಾವನ್ನಪ್ಪಿದ್ದಾರೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕುರ್ರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘರ್ಷಣೆಯಲ್ಲಿ ಇಲ್ಲಿಯವರೆಗೆ ಕನಿಷ್ಠ 30 ಜನ ಸಾವನ್ನಪ್ಪಿ, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬುಡಕಟ್ಟು ಸಮುದಾಯಗಳ ಮಧ್ಯೆ ಈ ಘರ್ಷಣೆ ನಡೆದಿದೆ ಎನ್ನಲಾಗಿದೆ.
ಅಲ್ಲದೇ, ವಿವಿಧ ಸಮುದಾಯಗಳ ನಡುವೆ ನಡೆಯುತ್ತಿರುವ ಹೋರಾಟದಲ್ಲಿ ಕಳೆದ ಮೂರು ದಿನಗಳಲ್ಲಿ ಕನಿಷ್ಠ 75 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ಹೇಳಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದು, ಮನೆ-ಮಠ ತೊರೆದಿದ್ದಾರೆ. 300ಕ್ಕೂ ಅಧಿಕ ಕುಟುಂಬಗಳು ಇದ್ದ ಪ್ರದೇಶ ಬಿಟ್ಟು ಪೇಶಾವರದ ಕಡೆಗೆ ವಲಸೆ ಹೋಗಿವೆ.
ಪಾಕಿಸ್ತಾನದ ಸ್ವತಂತ್ರ ಮಾನವ ಹಕ್ಕುಗಳ ಆಯೋಗ (ಎಚ್‌ಆರ್‌ಸಿಪಿ) ಹಿಂಸಾಚಾರ ಪರಿಸ್ಥಿತಿ ಕುರಿತು ಕೂಡಲೇ ಗಮನ ಹರಿಸುವಂತೆ ಕೇಳಿಕೊಂಡಿದೆ. ಇತ್ತೀಚೆಗೆ ಪಾಕ್ ನಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದ್ದು, ಅಲ್ಲಿನ ಜರು ಭಯದಲ್ಲಿ ವಾಸಿಸುವಂತಾಗುತ್ತಿದೆ.