ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ – ರೇಸ್‌ನಲ್ಲಿ ಟಿ20 ವಿಶ್ವಕಪ್ ಹೀರೋಗಳಾದ ಸಂಜು, ಬುಮ್ರಾ!

April 7, 2026
Share on WhatsappShare on FacebookShare on Twitter

ಬೆಂಗಳೂರು : ಮಾರ್ಚ್ ತಿಂಗಳ ಐಸಿಸಿ ‘ಪ್ಲೇಯರ್ ಆಫ್ ದ ಮಂತ್’ (ತಿಂಗಳ ಶ್ರೇಷ್ಠ ಆಟಗಾರ) ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಆಟಗಾರರ ಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಕಟಿಸಿದೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಭರವಸೆಯ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಹಾಗೂ ವೇಗದ ಬೌಲಿಂಗ್ ಅಸ್ತ್ರ ಜಸ್ಪ್ರೀತ್ ಬುಮ್ರಾ ಅವರು ಈ ಬಾರಿಯ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ಇವರೊಂದಿಗೆ ದಕ್ಷಿಣ ಆಫ್ರಿಕಾದ ಉದಯೋನ್ಮುಖ ಬ್ಯಾಟಿಂಗ್ ಪ್ರತಿಭೆ ಕಾನರ್ ಎಸ್ತರ್ಹೈಜೆನ್ ಕೂಡ ಈ ಪ್ರಶಸ್ತಿಯ ರೇಸ್‌ನಲ್ಲಿದ್ದು, ಪ್ರಶಸ್ತಿಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಕಾನರ್ ಗಮನ ಸೆಳೆದಿದ್ದಾರೆ.
ಮಾರ್ಚ್ ತಿಂಗಳು ಸಂಪೂರ್ಣವಾಗಿ ಸಂಜು ಸ್ಯಾಮ್ಸನ್ ಅವರದ್ದೇ ಆಗಿತ್ತು ಎಂದರೆ ತಪ್ಪಾಗಲಾರದು.

ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರೂ, ನಿರ್ಣಾಯಕ ಘಟ್ಟದಲ್ಲಿ ತಂಡಕ್ಕೆ ಮರಳಿದ ಸಂಜು ಸ್ಯಾಮ್ಸನ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಟೂರ್ನಿಯ ದಿಕ್ಕನ್ನೇ ಬದಲಿಸಿದರು. ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಅಜೇಯ 97 ರನ್ ಸಿಡಿಸುವ ಮೂಲಕ ಭಾರತ ತಂಡವನ್ನು ನಾಕೌಟ್ ಹಂತಕ್ಕೆ ಕೊಂಡೊಯ್ದರು.

ಆ ಬಳಿಕ ಅವರ ಬ್ಯಾಟ್‌ನಿಂದ ರನ್‌ಗಳ ಸುರಿಮಳೆಯೇ ಹರಿಯಿತು. ಮುಂಬೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಹಾಗೂ ಅಹಮದಾಬಾದ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಸತತವಾಗಿ 89 ರನ್‌ಗಳ ಎರಡು ಸ್ಫೋಟಕ ಇನಿಂಗ್ಸ್‌ಗಳನ್ನು ಆಡುವ ಮೂಲಕ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು. ಒತ್ತಡದ ಪರಿಸ್ಥಿತಿಯಲ್ಲೂ ನಿರ್ಭೀತಿಯಿಂದ ಬ್ಯಾಟ್ ಬೀಸಿದ ಸ್ಯಾಮ್ಸನ್ ಅವರ ಸ್ಥಿರ ಪ್ರದರ್ಶನವು ಭಾರತಕ್ಕೆ ಮತ್ತೊಂದು ವಿಶ್ವಕಪ್ ಕಿರೀಟವನ್ನು ತಂದುಕೊಟ್ಟಿತಲ್ಲದೆ, ಟೂರ್ನಿಯ ಶ್ರೇಷ್ಠ ಆಟಗಾರ (ಪ್ಲೇಯರ್ ಆಫ್ ದ ಟೂರ್ನಮೆಂಟ್) ಪ್ರಶಸ್ತಿಯನ್ನೂ ಅವರಿಗೆ ಒಲಿದುಬರುವಂತೆ ಮಾಡಿತು.

ಚೆಂಡಿನ ಮೂಲಕ ಪಾರುಪತ್ಯ

ಮತ್ತೊಂದೆಡೆ, ಭಾರತ ತಂಡದ ವೇಗದ ಬೌಲಿಂಗ್ ವಿಭಾಗದ ಆಧಾರಸ್ತಂಭ ಜಸ್ಪ್ರೀತ್ ಬುಮ್ರಾ ಅವರು ಚೆಂಡಿನ ಮೂಲಕ ತಮ್ಮ ಪಾರುಪತ್ಯ ಮೆರೆದಿದ್ದಾರೆ. ಸದಾ ಒತ್ತಡದ ಸಂದರ್ಭಗಳಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡುವ ಬುಮ್ರಾ, ಈ ಬಾರಿಯೂ ಭಾರತದ ಪಾಲಿನ ಟ್ರಬಲ್ ಶೂಟರ್ ಆಗಿ ಹೊರಹೊಮ್ಮಿದರು. ನಿರ್ಣಾಯಕ ಪಂದ್ಯಗಳಲ್ಲಿ ಅವರು 12.00ರ ಸರಾಸರಿ ಹಾಗೂ 7.00ರ ಅತ್ಯುತ್ತಮ ಎಕಾನಮಿಯೊಂದಿಗೆ 7 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಂಗೆಡಿಸಿದರು. ಅದರಲ್ಲೂ ವಿಶೇಷವಾಗಿ ಫೈನಲ್ ಪಂದ್ಯದಲ್ಲಿ ಕೇವಲ 15 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆಯುವ ಮೂಲಕ ನ್ಯೂಜಿಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ಈ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಬುಮ್ರಾ ಅವರ ಈ ಮಾರಕ ದಾಳಿಯೇ ಭಾರತದ ಗೆಲುವನ್ನು ಸುಲಭಗೊಳಿಸಿತು ಎಂದರೆ ಅತಿಶಯೋಕ್ತಿಯಲ್ಲ.

ಭಾರತೀಯ ಆಟಗಾರರ ಈ ದರ್ಬಾರಿನ ನಡುವೆ ದಕ್ಷಿಣ ಆಫ್ರಿಕಾದ ಯುವ ಆಟಗಾರ ಕಾನರ್ ಎಸ್ತರ್ಹೈಜೆನ್ ಕೂಡ ತಮ್ಮ ಅಸಾಧಾರಣ ಪ್ರದರ್ಶನದ ಮೂಲಕ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ಆಕ್ರಮಣಕಾರಿ ಹಾಗೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಕಾನರ್, ಐದು ಪಂದ್ಯಗಳಲ್ಲಿ 50ರ ಸರಾಸರಿ ಹಾಗೂ 145.98ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ 200 ರನ್ ಚಚ್ಚಿದ್ದಾರೆ. ಇವರ ಈ ಸ್ಫೋಟಕ ಪ್ರದರ್ಶನದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ನ್ಯೂಜಿಲೆಂಡ್ ನೆಲದಲ್ಲಿ 3-2 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿತು.

ಅಲ್ಲದೆ, ಪ್ಲೇಯರ್ ಆಫ್ ದ ಸೀರೀಸ್ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕ ಹಂತದಲ್ಲೇ ಇರುವ ಕಾನರ್, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ 40ರೊಳಗೆ ಸ್ಥಾನ ಪಡೆಯುವ ಮೂಲಕ ಭರವಸೆ ಮೂಡಿಸಿದ್ದಾರೆ. ಒಟ್ಟಾರೆಯಾಗಿ, ಈ ಮೂವರೂ ಆಟಗಾರರು ತಮ್ಮದೇ ಆದ ವಿಶಿಷ್ಟ ಪ್ರದರ್ಶನಗಳ ಮೂಲಕ ಪ್ರಶಸ್ತಿಗೆ ಪ್ರಬಲ ಪೈಪೋಟಿ ಒಡ್ಡಿದ್ದು, ಅಂತಿಮವಾಗಿ ಯಾರ ಕೊರಳಿಗೆ ಈ ಪ್ರಶಸ್ತಿ ಒಲಿಯಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

Tags: CricketIndiaKarnataka News beat
SendShareTweet
Previous Post

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

Next Post

ಎರಡೂ ಕ್ಷೇತ್ರಗಳ ಉಪ‌ಚುನಾವಣೆಯಲ್ಲಿ ನಾವೇ ಗೆಲ್ತೇವೆ – ಡಿಸಿಎಂ ಡಿಕೆಶಿ ವಿಶ್ವಾಸ

Related Posts

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!
ಕ್ರೀಡೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!
ಕ್ರೀಡೆ

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!
ಕ್ರೀಡೆ

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು
ಕ್ರೀಡೆ

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ
ಕ್ರೀಡೆ

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ

ಇಂಗ್ಲೆಂಡ್ ಟಿ20 ಸರಣಿಗೂ ಮುನ್ನ ವಾಟರ್ ಬಲೂನ್ ಕದನದಲ್ಲಿ ಮಿಂಚಿದ ಭಾರತೀಯ ವನಿತೆಯರು!
ಕ್ರೀಡೆ

ಇಂಗ್ಲೆಂಡ್ ಟಿ20 ಸರಣಿಗೂ ಮುನ್ನ ವಾಟರ್ ಬಲೂನ್ ಕದನದಲ್ಲಿ ಮಿಂಚಿದ ಭಾರತೀಯ ವನಿತೆಯರು!

Next Post
ಎರಡೂ ಕ್ಷೇತ್ರಗಳ ಉಪ‌ಚುನಾವಣೆಯಲ್ಲಿ ನಾವೇ ಗೆಲ್ತೇವೆ – ಡಿಸಿಎಂ ಡಿಕೆಶಿ ವಿಶ್ವಾಸ

ಎರಡೂ ಕ್ಷೇತ್ರಗಳ ಉಪ‌ಚುನಾವಣೆಯಲ್ಲಿ ನಾವೇ ಗೆಲ್ತೇವೆ - ಡಿಸಿಎಂ ಡಿಕೆಶಿ ವಿಶ್ವಾಸ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat