ಚಿಕ್ಕಮಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ವಿಚಾರವಾಗಿ ಬಿಜೆಪಿ ಕಾರ್ಯಕರ್ತರಿಂದ ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಆಶೀರ್ವಾದ ಸರ್ಕಲ್ ನಲ್ಲಿ ರಸ್ತೆ ತಡೆದು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ್ದು, ರಕ್ತವನ್ನ ಚೆಲ್ಲುತ್ತೇವೆ ನ್ಯಾಯವನ್ನು ಪಡೆಯುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. ರಸ್ತೆ ಮಧ್ಯೆ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬೆಂಕಿ ಹಾಕದಂತೆ ತಡೆಯಲು ಪೊಲೀಸರು ಮುಂದಾಗಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ, ತಳ್ಳಾಟ ನಡೆದಿದೆ.