ರಾಯಚೂರು: 11 ವರ್ಷದ ಬಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 5ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಶಿವಪ್ರಸಾದ್ ಸಾವನ್ನಪ್ಪಿದ ದುರ್ದೈವಿ ಬಾಲಕ. ಈ ಬಾಲಕ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ವಿದ್ಯಾರ್ಥಿ ಶಿವಪ್ರಸಾದ್ ವಕೀಲ ಶಿವಣ್ಣ ಎಂಬುವವರ ಪುತ್ರ. ಈತ ಗಬ್ಬೂರ್ ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಕೋಚಿಂಗ್ ಸೆಂಟರ್ ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.