ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಾದ ಫರ್ಟಿಲೈಸರ್ಸ್ ಆ್ಯಂಡ್ ಕೆಮಿಕಲ್ಸ್ ಟ್ರಾವಾಂಕೋರ್ ಲಿಮಿಟೆಡ್ (Fertilizers and Chemicals Travancore Limited-FACT)ನಲ್ಲಿ ಖಾಲಿ ಇರುವ ವಿವಿಧ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: Fertilizers and Chemicals Travancore Limited (FACT)
ಹುದ್ದೆಗಳ ಹೆಸರು: ಕ್ಲರ್ಕ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್, ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 07
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು 26 ವರ್ಷದೊಳಗಿನವರಾಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಒಡಿಶಾ, ಕರ್ನಾಟಕ, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು fact.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಇನ್ನು, ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು DGM (HR), HR Department, FEDO Building, FACT, Udyogamandal, PIN-683501 ವಿಳಾಸಕ್ಕೆ ಕಳುಹಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರಿಗೆ ಆಗಸ್ಟ್ 14ರವರೆಗೆ ಅವಕಾಶವಿದೆ.



















