ದಲಿತರ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಎಸ್ಸಿ, ಎಸ್ಟಿ ಶಾಸಕರ ಸಭೆ ಕರೆದಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ಈ ಸಭೆ ನಡೆಯಲಿದ್ದು, ಎಲ್ಲಾ ಪಕ್ಷಗಳ ಎಸ್ಸಿ, ಎಸ್ಟಿ ಶಾಸಕರಿಗೆ ಸಿಎಂ ಕಚೇರಿಯಿಂದ ಈಗಾಗಲೇ ಆಹ್ವಾನ ನೀಡಲಾಗಿದೆ.
ಈ ಹಿಂದೆ ಬಿಜೆಪಿ ಅವಧಿಯಲ್ಲಿ ಹೆಚ್ಚಿಸಿದ್ದ ಎಸ್ಸಿ, ಎಸ್ಟಿ ಹೆಚ್ಚುವರಿ ಮೀಸಲಾತಿಯನ್ನು ಇತ್ತೀಚೆಗೆ ನ್ಯಾಯಾಲಯ ರದ್ದುಗೊಳಿಸಿ ಅನೂರ್ಜಿತಗೊಳಿಸಿದೆ. ಹೀಗಾಗಿ, ಸಂವಿಧಾನಕ್ಕೆ ತಿದ್ದುಪಡಿ ತಂದು ಹೆಚ್ಚುವರಿ ಮೀಸಲಾತಿಯನ್ನು ಸೇರ್ಪಡೆ ಮಾಡಬೇಕಾದ ಅನಿವಾರ್ಯತೆ ಸರ್ಕಾರಕ್ಕಿದೆ. ಈ ನಿಟ್ಟಿನಲ್ಲಿ ಮೀಸಲಾತಿ ಮರುಸ್ಥಾಪನೆ, ಸರ್ಕಾರ ತೆಗೆದುಕೊಳ್ಳಬೇಕಾದ ನಿರ್ಧಾರ ಹಾಗೂ ಕೇಂದ್ರ ಸರ್ಕಾರಕ್ಕೆ ಮಾಡಬೇಕಿರುವ ಒತ್ತಾಯದ ಕುರಿತು ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಲಾಗುವುದು. ಜೊತೆಗೆ ಎಸ್ಸಿಪಿ-ಟಿಎಸ್ಪಿ ಹಣ ಮತ್ತು ಸಮುದಾಯದ ಅಭಿವೃದ್ಧಿ ಬಗ್ಗೆಯೂ ಚರ್ಚೆ ನಡೆಯಲಿದೆ.


















