ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ದೇವೇಗೌಡರ ಮಗ ಅಸೂಯೆಯಿಂದ ಮಾತನಾಡುತ್ತಾರೆ ಬಿಡಿ ಎಂದು ಅವರು ವ್ಯಂಗ್ಯವಾಡಿದ್ದಾರೆ. ಹಿಂದೆ ಕುಮಾರಸ್ವಾಮಿ ಅವರು ಕೂಡ ಮೇಕೆದಾಟು ಯೋಜನೆ ಆಗಬೇಕು ಎಂದಿದ್ದರು ಹಾಗೂ ಒಂದೇ ದಿನದಲ್ಲಿ ಅನುಮತಿ ತರುವುದಾಗಿ ಹೇಳಿದ್ದರು. ಈಗಲೂ ಆ ಕೆಲಸವನ್ನು ಅವರು ಮಾಡುತ್ತಾರೆ ಎಂಬ ವಿಶ್ವಾಸ ತಮಗಿದೆ.
ಮೇಕೆದಾಟು ಯೋಜನೆಯಿಂದ ಮಂಡ್ಯ, ಹಾಸನ, ತುಮಕೂರು, ಮೈಸೂರು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಸಹಕಾರಿಯಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


















