ಬೆಂಗಳೂರು : ರಾಜ್ಯದ ಹಿತದೃಷ್ಟಿಯಿಂದ ಬಂದ್ ವಾಪಸ್ ಪಡೆದ ಎಲ್ಲಾ ಕನ್ನಡಪರ ಸಂಘಟನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಂಘಟನೆಗಳ ಮುಖಂಡರು ತಮ್ಮನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಕನ್ನಡಪರ ಸಂಘಟನೆಗಳು ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು ತಮ್ಮ ಮುಂದಿಟ್ಟಿದ್ದಾರೆ. ಸಂಘಟನೆಗಳು ನೀಡಿರುವ ಬೇಡಿಕೆಗಳನ್ನು ಪರಿಶೀಲನೆ ಮಾಡುವುದಾಗಿ ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದು, ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು. ಅವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು ಭೇಟಿಯಾದ ಕನ್ನಡಪರ ಹೋರಾಟಗಾರರು!



















