ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದಾರೆ.
ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಾ? ಎಂದು ಪ್ರಶ್ನಿಸಿದ್ದಾರೆ.
ಮುಡಾ ಪ್ರಕರಣದ ಕುರಿತು ಹರಿಯಾಣ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿ ಕರ್ನಾಟಕದ ಮುಡಾ ಹಗರಣದ ಕುರಿತು ಉಲ್ಲೇಖಿಸಿ, ಸಿಎಂ ವಿರುದ್ಧ ಆರೋಪಿಸಿದ್ದರು. ಈ ವಿಷಯವಾಗಿ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ನೀಡಿದ್ದಾರಾ? ಅವರು ರಾಜೀನಾಮೆ ನೀಡದೆ ಸರ್ಕಾರದಲ್ಲಿ ಮುಂದುವರೆದರೆ ಅವರ ಸರ್ಕಾರಕ್ಕೆ ಮುಜುಗರ ಆಗುವುದಿಲ್ಲವೇ?ಎಂದು ಪ್ರಶ್ನಿಸಿದ್ದಾರೆ.
ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನಾನು ರಾಜೀನಾಮೆ ಕೊಡುವುದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.