ಡೆಡ್ರಾಡೂನ್ ನಲ್ಲಿ ಚಾರಣಕ್ಕೆ ತೆರಳಿದ್ದ ನಾಲ್ವರು ಕನ್ನಡಿಗರು ಸಾವನ್ನಪ್ಪಿದ್ದು, ಹಲವರನ್ನು ರಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಕ್ಷಿಸಿದ ಚಾರಣಿಗರನ್ನು ಹಾಗೂ ಮೃತದೇಹ ತರಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಲ್ಲದೇ, ಡೆಡ್ರಾಡೂನ್ ಕಂದಾಯ ಸಚಿವರು ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ಮಾತನಾಡಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಹೇಳಿದ್ದಾರೆ.
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಚಾರಣಿಗರೊಂದಿಗೆ ಮಾತನಾಡಿದ್ದಾರೆ. ಚಾರಣದಿಂದಾಗಿ ಇಲ್ಲಿಯವರೆಗೆ 9 ಜನ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.